ಚಳ್ಳಕೆರೆ:-ದೇಶದ ಸಂವಿಧಾನವು ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದ್ದು ಅವುಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಮೀರ್ ಪಿ ನಂದ್ಯಾಳ್ ತಿಳಿಸಿದರು. ನಗರದ ಬಾಪೂಜಿ ಬಾಲಕಿಯರ ಶಾಲಾ ಆವರಣದಲ್ಲಿ ವಕೀಲರ ಸಂಘ ಕಾನೂನು ಸೇವಾ ಸಮಿತಿ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜನರಿಗೆ ಕಾನೂನಿನ ಅರಿವಿಲ್ಲದಾಗ ನ್ಯಾಯಾಲಯಗಳ ಮೊರೆ ಹೋಗುತ್ತಾರೆ ಎಂದರು.