ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ಜಾಹ್ನವಿ ಸ್ಪಷ್ಟನೆ
ವಿಜಯನಗರ ಜಿಲ್ಲೆಯಲ್ಲಿ ಈ ಬಾರಿ ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಪೊಲೀಸ್ ಇಲಾಖೆ ಆದೇಶಿಸಿದೆ. ಡಿಜೆ ಬದಲು ಸಾಂಪ್ರದಾಯಿಕ ವಾದ್ಯಮೇಳಗಳನ್ನು ಬಳಸಲು ಅವಕಾಶವಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಜಾಹ್ನವಿ ತಿಳಿಸಿದ್ದಾರೆ.