ರಾಯಚೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಕಟ್ಟಾಳು ಇನ್ನಿಲ್ಲ
ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಜಿಲ್ಲಾ ವಕ್ಫ ಸಲಹಾ ಸಮಿತಿ ಅಧ್ಯಕ್ಷ ನಜೀರ ಅಹ್ಮದ ಪಂಜಾಬಿ (75) ಅವರು ಸೆ.28 ರ ರವಿವಾರ ಮಧ್ಯಾಹ್ನ 1 ಗಂಟೆಗೆ ನಿಧನ ಹೊಂದಿದರು. ಕಾಂಗ್ರೆಸ್ ಪಕ್ಷದ ಕಟ್ಟಾ ಬೆಂಬಲಿಗನಾದ ನಜೀರ ಅಹ್ಮದ ಪಂಜಾಬಿ ಒಂದು ಬಾರಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು, ಕಳೆದ ಅವಧಿಯ ಸಿದ್ದರಾಮಯ್ಯನವರ ಸರಕಾರ ಇವರನ್ನು ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಸದಸ್ಯರಾಗಿ ಸಹ ನೇಮಿಸಲಾಗಿತ್ತು. ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಅಪಾರ ಸಂಖ್ಯೆಯ ಬಂಧು ಬಳಗವನ್ನ ಅಗಲಿದ್ದಾರೆ. ಅವರ ಅಕಾಲಿಕ ಮರಣ ಸಮುದಾಯಕ್ಕೆ ತುಂಬಲಾರದ ನಷ್ಟ ಎಂದು ಕೆಪಿಸಿಸಿ ಜಿಲ್ಲಾ ಮಾಧ್ಯಮ ವಕ್ತಾರರಾದ ಡಾ.ರಜಾಕ್ ಉಸ್ತಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.