ಬೈಕ್ ಗೆ ಗುದ್ದಿ ಎರಡು ಕಿಮೀ ಬೈಕ್ ಎಳೆದೊಯ್ದ ಕಾರು ಚಾಲಕ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆಯಲ್ಲಿ ಇಂದು ಮದ್ಯದ ಅಮಲಿನಲ್ಲಿದ್ದ ಕಾರು ಚಾಲಕನೊಬ್ಬ ಬೈಕ್ ಗೆ ಡಿಕ್ಕಿ ಹೊಡೆದು, ಬೈಕ್ ಅನ್ನು ಸುಮಾರು 2 ಕಿಲೋ ಮೀಟರ್ಗಳವರೆಗೆ ರಸ್ತೆಯಲ್ಲೇ ಎಳೆದೊಯ್ದ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಮಾತನಾಡಲು ನಿಂತಿದ್ದ ಬೈಕ್ ಸವಾರನಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ರಸ್ತೆಗೆ ಬಿದ್ದಿದ್ದು, ಬೈಕ್ ಕಾರಿನ ಮುಂಭಾಗದ ಅಡಿಯಲ್ಲಿ ಸಿಲುಕಿಕೊಂಡಿದೆ. ಆದರೂ, ಚಾಲಕ ಕಾರನ್ನು ನಿಲ್ಲಿಸದೆ ವೇಗವಾಗಿ ಚಲಾಯಿಸಿದ್ದಾನೆ.