ಚಿತ್ರದುರ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮ ದಿನಾಚರಣೆ
ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬುದವಾರ ಬೆಳಗ್ಗೆ 11.30 ಕ್ಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಂ ಕೆ ತಾಜ್ ಪೀರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇನ್ನೂ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕೇಕ್ ಕಟ್ ಮಾಡುವ ಮೂಲಕ ಇಂದಿರಾಗಾಂಧಿ ಜನ್ಮ ದಿನಾಚರಣೆಯನ್ನ ಆಚರಣೆ ಮಾಡಿದ್ದು ಕಂಡು ಬಂದದ್ದು ಇಂದಿರಾಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ