ಇಂಡಸಕಟ್ಟೆ ಗ್ರಾಮದ ಅಪಘಾತ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ ನೀಡಿದ್ದಾರೆ. ಶನಿವಾರ ರಾತ್ರಿ 10 ಗಂಟೆ ವೇಳೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಸ ಕಟ್ಟೆ ಗ್ರಾಮದ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದು ನಾಲ್ವರು ಮೃತಪಟ್ಟಿದ್ದು ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.