ಬಂಗಾರಪೇಟೆ: ಗರುಡ ಕೆಂಪನಹಳ್ಳಿಯಲ್ಲಿ ಎಂಟು ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷ ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ
ಎಂಟು ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷ ಅರಣ್ಯ ಇಲಾಖೆ ಸಿಬ್ಬಂದಿಯಿಂದ ರಕ್ಷಣೆ. ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಗರುಡುಕೆಂಪನಹಳ್ಳಿ ಗ್ರಾಮದ ಸರ್ವೆ ನಂಬರ್ ೩ ಅಪ್ಪು ಎಂಬುವರ ಜಮೀನಿನಲ್ಲಿ ಸುಮಾರು ಎಂಟು ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು ಗ್ರಾಮಸ್ಥರೆಲ್ಲರೂ ಭಯಭೀತಗೊಂಡು ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಹೆಬ್ಬಾವನ್ನು ರಕ್ಷಿಸಿ ಗ್ರಾಮಸ್ಥರಿಗೆ ಧೈರ್ಯ ತುಂಬಿ ಹೆಬ್ಬಾವನ್ನು ಕನಮನಹಳ್ಳಿ ಅರಣ್ಯ ಪ್ರದೇಶಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮಸ್ಥರು ನಿಟ್ಉಸಿರು ಬಿಡುವಂತಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.