ದಾಂಡೇಲಿ : ಸಂವಿಧಾನ ದಿನಾಚರಣೆ ಅಂಗವಾಗಿ ಪಟೇಲ್ ವೃತ್ತದಿಂದ ನಗರಸಭೆಯವರೆಗೆ ತಾಲ್ಲೂಕಾಡಳಿತ ಮತ್ತು ನಗರ ಸಭೆಯ ವತಿಯಿಂದ ಬುಧವಾರದ ಬೆಳಿಗ್ಗೆ 10.30 ಗಂಟೆ ಸುಮಾರಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ನಗರ ಸಭೆ ಅಧ್ಯಕ್ಷರಾದ ಅಷ್ಪಾಕ ಶೇಖ್, ತಹಶೀಲ್ದಾರ್ ಶೈಲೇಶ ಪರಮಾನಂದ, ತಾ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ.ಸಿ. ಹಾದಿಮನಿ, ಉಪಾಧ್ಯಕ್ಷೆ ಶಿಲ್ಪಾ ಕೋಡೆ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಧಾ ರಾಮಲಿಂಗ ಜಾಧವ ಮೊದಲಾದವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ನಂತರ ಜಾಥಾ ಆರಂಭಗೊಂಡಿತು,