ಶಿಕ್ಷಕರಾಗಿ ನೇಮಕಗೊಳ್ಳಲು ಮತ್ತು ಸೇವೆಯಲ್ಲಿರುವ ಶಿಕ್ಷಕರು ಬಡ್ತಿ ಪಡೆಯಲು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರು ಸೇವೆಯಲ್ಲಿರುವ ಶಿಕ್ಷಕರಿಗೆ ದೊಡ್ಡ ಶಾಕ್ ನೀಡಿದೆ. ಮುಂದಿನ ಐದು ವರ್ಷಗಳಿಗಿಂತ ಅಧಿಕ ಕಾಲ ಸೇವೆಯಲ್ಲಿ ಮುಂದುವರಿಯಲು ಬಯಸುವವರು ಮುಂದಿನ ಎರಡು ವರ್ಷಗಳಲ್ಲಿ ಟಿಇಟಿ ಅರ್ಹತೆ ಪಡೆಯಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡಬಹುದು ಅಥವಾ ಅಂತಿಮ ಪ್ರಯೋಜನಗಳೊಂದಿಗೆ ಕಡ್ಡಾಯ ನಿವೃತ್ತಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠ ತಿಳಿಸಿದ್ದು ಇದು ಶಿಕ್ಷಕರಿಗೆ ತುಂಬಾ ಅನ್ಯಾಯವಾಗುತ್ತಿದೆ.