ಚಿಂಚೋಳಿ: ಹುಚ್ಚು ನಾಯಿಯ ಹುಚ್ಚಾಟ: ಸುಲೇಪೇಟ್ನಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯ, ಗ್ರಾಮದಲ್ಲಿ ಭಯದ ವಾತಾವರಣ
ಹುಚ್ಚು ನಾಯಿಯೊಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ ಭಯಾನಕ ಘಟನೆ ಸುಲೇಪೇಟ್ ಗ್ರಾಮದಲ್ಲಿ ನಡೆದಿದೆ. ಬಸವೇಶ್ವರ ವೃತ್ತದಲ್ಲಿ ಕಾಣಿಸಿಕೊಂಡ ಹುಚ್ಚನಾಯಿ ಹತ್ತಕ್ಕೂ ಅಧಿಕ ಜನರನ್ನು ಕಚ್ಚಿ ಗಾಯಗೊಳಿಸಿದೆ. ಸ್ಥಳಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೂವರಿಗೆ ಹೆಚ್ಚುವರಿ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ...