ಕಲಬುರಗಿ: ಗೃಹ ಸಚಿವರ ರಾಜೀನಾಮೆಗೆ ನಗರದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಆಗ್ರಹ
ದೆಹಲಿಯ ಕೆಂಪು ಕೋಟೆ ಬಳಿ ನಡೆದ ಕಾರ್ ಬಾಂಬ್ ಸ್ಪೋಟ್ ಪ್ರಕರಣವನ್ನು ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ನಗರದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಆಗ್ರಹಿಸಿದ್ದಾರೆ. ಮಂಗಳವಾರ 12 ಗಂಟೆ ಸುಮಾರಿಗೆ ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಗುಪ್ತಚರ ಇಲಾಖೆ ಮೂಲಕ ಭಯೋತ್ಪಾದಕರ ಕೃತ್ಯ ವಿಫಲಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಇದರ ನೇರ ಹೊಣೆಯನ್ನು ಕೇಂದ್ರ ಗೃಹ ಸಚಿವರು ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು...