ಚಿಂತಾಮಣಿ: ಮುರುಗಮಲ್ಲ ಗ್ರಾಮದಲ್ಲಿ ಅನುಮಾನಸ್ಪದ ರೀತಿ ಯುವಕನ ಶವ ಪತ್ತೆ
ಕೊಳಚೆ ನೀರಿನಲ್ಲಿ ಯುವಕನ ಶವ ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಕೊಳಚೆ ನೀರು ಸೇರುವ ಕುಂಟೆಯಲ್ಲಿ ಪತ್ತೆಯಾಗಿದೆ. ಇನ್ನೂ ಕಳೆದ ಮೂರು ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ. ಮೃತ ದೇಹವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಕೆಂಚಾರ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.