ಹಳಿಯಾಳ: ಸರ್ ಎಂ. ವಿಶ್ವೇಶ್ವರಯ್ಯನವರ ಜಯಂತಿ ನಿಮಿತ್ತ ದೇಶಪಾಂಡೆ ಐಟಿಐ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಹಳಿಯಾಳ : ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆಯ ನಿಮಿತ್ತವಾಗಿ ಶ್ರೀ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ದೇಶಪಾಂಡೆ ಐಟಿಐ ಕಾಲೇಜು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಹಾಗೂ ರಕ್ತನಿಧಿ ಘಟಕ, ಧಾರವಾಡದ ಜಿಲ್ಲಾಸ್ಪತ್ರೆಯ ಸಂಯುಕ್ತ ಆಶ್ರಯದಡಿ ಹಳಿಯಾಳ ಪಟ್ಟಣದ ದೇಶಪಾಂಡೆ ಐಟಿಐ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವು ಸೋಮವಾರ ಸಂಜೆ 4:00 ಗಂಟೆ ಸುಮಾರಿಗೆ ಸಂಪನ್ನಗೊಂಡಿತು. ಈ ಶಿಬಿರದಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ ಶಿಬಿರಾರ್ಥಿಗಳು ಹಾಗೂ ಬೋಧಕ ವರ್ಗ ಸೇರಿ ಸುಮಾರು 42 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.