ಧಾರವಾಡ: ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು: ನಗರದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾಗಪ್ಪ ಹುಂಡಿ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಬ್ಬು ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾಗಪ್ಪ ಹುಂಡಿ ತಿಳಿಸಿದರು. ನಗರದಲ್ಲಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಬಲ ಬೆಲೆ ನಿಗದಿ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.