ಆದಿಕವಿ ಮಹರ್ಷಿ ಶ್ರೀ ವಾಲ್ಮೀಕಿ ವಿಶ್ವ ವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ಶಿವಾನಂದ ಕೆಳಗಿನಮನಿ ಅವರನ್ನು ನೇಮಕ ಮಾಡಿ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಜುಲೈ 5 ರ ಶನಿವಾರ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ವಿಶ್ವ ವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಕುಲಪತಿಗಳನ್ನಾಗಿ ನಾಲ್ಕು ವರ್ಷ ಅವಧಿಗೆ ನೇಮಕಗೊಳಿಸಲಾಗಿದೆ. ಈ ಹಿಂದೆ ಮೈಕ್ರೊಬಯೋಲಾಜಿ ವಿಭಾಗದ ಪ್ರಾಧ್ಯಾಪಕ ಸುಯಮೀಂದ್ರ ಅವರು ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.