ಬೆಂಗಳೂರು ಉತ್ತರ: ಕಿದ್ವಾಯಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನ ಗುತ್ತಿಗೆ ನೌಕರರ ಪ್ರತಿಭಟನೆ
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರನ್ನ ಶೋಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಿದ್ವಾಯಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.ಮಹಿಳಾ ನೌಕರರಿಗೆ ಹೆರಿಗೆ ಭತ್ಯೆ, ರಜೆ ನೀಡದೆ ಶೋಷಿಸಲಾಗುತ್ತಿದೆ ಎಂದು ಆರೋಪಿಸಿ ಆಗಸ್ಟ್ 18ರಂದು ಬೆಳಿಗ್ಗೆ 8ರಿಂದಲೇ ಕರ್ತವ್ಯಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸಲಾಗುತ್ತಿದೆ. ಅಷ್ಟೆ ಅಲ್ಲದೆ ಹೆರಿಗೆ ರಜೆ ಮೇಲೆ ತೆರಳಿದ್ದ ನೌಕರರನ್ನ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತಿಲ್ಲ, ವೇತನ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳನ್ನ ಬಗೆಹರಿಸುವಂತೆ ಗುತ್ತಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆಯಿಂದ ರೋಗಿಗಳಿಗೆ ಸಕಾಲಕ್ಕೆ ಸ್ಪಂದನೆ ಸಿಗದೆ ಪರದಾಡುವಂತಾಗಿದೆ.