ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಡಿ. 25ರ ತಡರಾತ್ರಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರಿಗೆ ಕೆಲವು ಯುವಕರು ಕಿರುಕುಳ ನೀಡಿದ್ದಾರೆ. ತ್ರಿಬಲ್ ರೈಡಿಂಗ್ ಮಾಡುತ್ತಿದ್ದ ಯುವಕರು, ಹೆಲ್ಮಟ್ ಧರಿಸದೆ ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಯುವತಿಯನ್ನು ಹಿಂಬಾಲಿಸಿ, ಆಕೆಗೆ ಟಾರ್ಚರ್ ನೀಡಿದ್ದಾರೆ. ಕಾರು ಚಾಲಕನೊಬ್ಬ ಈ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಟ್ರಾಫಿಕ್ ಪೊಲೀಸರಿಗೂ ಟ್ಯಾಗ್ ಮಾಡಿದ್ದಾರೆ.