ಬೆಂಗಳೂರಿನಲ್ಲಿ ಟ್ರಾಫಿಕ್ ನಡುವೆಯೂ ಕೇವಲ 7 ನಿಮಿಷದಲ್ಲಿ 10 ಕಿ.ಮೀ. ಜೀವಂತ ಹೃದಯವನ್ನು ಯಶಸ್ವಿಯಾಗಿ ಸಾಗಿಸಲಾಗಿದೆ. ಮಹದೇವಪುರ ಕಿಮ್ಸ್ ಆಸ್ಪತ್ರೆಯಿಂದ ವೈಟ್ಫೀಲ್ಡ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಸೋಮವಾರ ಸಂಜೆ 6.30ರ ಸುಮಾರಿಗೆ ಹೊರಟ ಹೃದಯವನ್ನು, ಟ್ರಾಫಿಕ್ ಪೊಲೀಸರ ಸಹಕಾರದೊಂದಿಗೆ ಯಶಸ್ವಿಯಾಗಿ ತಲುಪಿಸಲಾಗಿದೆ.