ಕೊಳ್ಳೇಗಾಲ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ಅಪಾರ ಜನಸ್ತೊಮದ ನಡುವೆ ಕೊಳ್ಳೇಗಾಲ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೇಣದ ಬತ್ತಿ ಮೆರವಣಿಗೆ ಭವ್ಯವಾಗಿ ನೆರವೇರಿತು. ನಗರದ ನಾನಾ ರಸ್ತೆಗಳ ಮೂಲಕ ಸಾಗಿದ ಈ ಮೆರವಣಿಗೆಯಲ್ಲಿ ಅಂಬೇಡ್ಕರ್ ಸಂಘದ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮೊಂಬತ್ತಿ ಹಿಡಿದು ಭಾಗವಹಿಸಿದರು. ಮೆರವಣಿಗೆ ಅ ಡಾ. ಬಿ. ಆರ್. ಅಂಬೇಡ್ಕರ್ ವೃತ್ತಕ್ಕೆ ತಲುಪಿ ವೃತ್ತದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.