ಶಿರಸಿ: ಪತ್ರಿಕಾ ಭವನದಲ್ಲಿ ನ.9ರಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ,ಮತದಾನಕ್ಕೆ ಸಕಲ ಸಿದ್ಧತೆ
ಶಿರಸಿ : ನವೆಂಬರ 9 ಬೆಳಿಗ್ಗೆ 9 ರಿಂದ ಅಪರಾಹ್ನ 3 ಗಂಟೆಯ ವರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಒಂದು ಮತ್ತು ಉಪಾಧ್ಯಕ್ಷ ಹುದ್ದೆಯ ಮೂರು ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಗಣೇಶ ನಗರದಲ್ಲಿರುವ ಪತ್ರಿಕಾ ಭವನವನ್ನು ಮತಗಟ್ಟೆಯನ್ನಾಗಿ ಪರಿವರ್ತಿಸಲಾಗಿದೆ. ಎಂದುಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಶಿರಸಿ ಅಶೋಕ ಹಾಸ್ಯಗಾರ, ಮಾಧ್ಯಮಕ್ಕೆ ಮಾಹಿತಿ ನೀಡಿ ಸುಗಮ ಮತ್ತು ಗೌಪ್ಯ ಮತದಾನಕ್ಕೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.