ಬಳ್ಳಾರಿ: ತಾಲೂಕಿನ ಕರ್ಚೇಡು ಗ್ರಾಮದಲ್ಲಿ
ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ
ಬಳ್ಳಾರಿ ತಾಲೂಕಿನ ಕರ್ಚೇಡು ಗ್ರಾಮದಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿ ಸಾರ್ವಜನಿಕರು ಸೋಮವಾರ ಬೆಳಿಗ್ಗೆ 8ಗಂಟೆಗೆ ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಏಕಾಏಕಿ ಬಸ್ ಡಿಪೋ ಮ್ಯಾನೇಜರ್ ಹೇಳಿದ್ದಾರೆ ಅಂತ ಬಸ್ ಬೇರೆ ಊರಿಗೆ ವರ್ಗಾವಣೆ ಮಾಡಿದ್ದಾರೆ ನಮ್ಮ ರೋಟ್ ಬಸ್ ಬಿಡಬೇಕು ಇಲ್ಲ ಹೆಚ್ಚುವರಿ ಬಸ್ ಬಿಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.