ಸಾಗರ: ಕೂಡಲೇ ಪಂಪ್ಡ್ ಸ್ಟೋರೇಜ್ ಯೋಜನೆ ಕೈ ಬಿಡಿ, ಸಾಗರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ
Sagar, Shimoga | Oct 6, 2025 ಸರ್ಕಾರದ ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈ ಬಿಡುವಂತೆ ಒತ್ತಾಯಿಸಿ ಸಾಗರದಲ್ಲಿ ನಡೆಯುತ್ತಿರುವ ರೈತ ಸಂಘದ ಪ್ರತಿಭಟನಾ ಸ್ಥಳಕ್ಕೆ ಸೋಮವಾರ ಸಂಜೆ 5 ಗಂಟೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ನೀಡುವ ಜೊತೆಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಈ ಯೋಜನೆ ಸರ್ಕಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಇದೊಂದು ಅವೈಜ್ಞಾನಿಕ ಯೋಜನೆ ಯಾಗಿದ್ದು ಸರ್ಕಾರ ಈ ಯೋಜನೆ ಕೈ ಬಿಡಬೇಕು, ಇಲ್ಲದಿದ್ದರೆ ಮುಂದಿನ ದಿನದಲ್ಲಿ ಉಗ್ರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದರು