ಚಿತ್ರದುರ್ಗದ ಬಾಲ ಭವನದಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಮಧ್ಯಾಹ್ನ 12 ಗಂಟೆಗೆ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮ ಉದ್ಘಾಟಿಸಿದ ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಅವರು ಮಾತನಾಡಿದ್ದು ಮಕ್ಕಳ ಸೃಜನಾತ್ಮಕ, ಪಠ್ಯೇತರ ಚಟುವಟಿಕೆಗಳಿಗೆ ಬಾಲಭವನ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ತಿಳಿಸಿದರು