ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ ನಿಜಶರಣ ಅಂಬಿಗ ಚೌಡಯ್ಯನವರ ಮೂರ್ತಿ ಅನಾವರಣ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಜಗದ್ಗುರು ಶಾಂತಭೀಷ್ಮಚೌಡಯ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಪಾರ ಭಕ್ತರು ಪಾಲ್ಗೊಂಡರು. ಭಾನುವಾರ 4 ಗಂಟೆಗೆ ಸಮಾರಂಭ ನಡೆಯಿತು...