ಧಾರವಾಡ: ಜಿಲ್ಲೆಯಲ್ಲಿ ನಾಯಿಗಳ ಕಡಿತ ಪ್ರಕರಣ ಹೆಚ್ಚಾಗುತ್ತಿದೆ. ಅಗತ್ಯ ಔಷಧಿಯ ಪೂರೈಕೆ: ನಗರದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ ಹೊನಕೇರಿ
ಧಾರವಾಡ ಜಿಲ್ಲೆಯಲ್ಲಿ ನಾಯಿಗಳ ಕಡಿತ ಪ್ರಕರಣ ಹೆಚ್ಚಾಗುತ್ತಿದೆ. ಅಗತ್ಯ ಔಷಧಿಯ ಪೂರೈಕೆಯನ್ನು ಮಾಡಲಾಗುತ್ತಿದೆ ಎಂದು ಧಾರವಾಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು.