ಅಂಕೋಲಾ : ಅರ್ಚಕ ನೋರ್ವ ಪ್ರೇಮ ವೈಫಲ್ಯದಿಂದ ನೊಂದುಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಅಸ್ಲ ಗದ್ದೆಯಲ್ಲಿ ನಡೆದಿದೆ. ಪಟ್ಟಣದ ದುರ್ಗಾದೇವಿ ದೇವಸ್ಥಾನ ಅರ್ಚಕ ಪವನ್ ಭಟ್ (25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಈತ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಮದುವೆ ಕುರಿತು ಪ್ರಸ್ತಾಪಿಸಿದಾಗ ಪ್ರೇಯಸಿ ಅದಕ್ಕೆ ನಿರಾಕರಿಸಿದ ಕಾರಣ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.