ವಸೂರು ಗ್ರಾಮದ ಬಳಿ ರಸ್ತೆ ಬದಿಯ ವಿಧ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನೂ ಶನಿವಾರ ರಾತ್ರಿ ಘಟನೆ ನಡೆದಿದ್ದು ಬಾನುವಾರ ಬೆಳಗ್ಗೆ 11 ಗಂಟೆಗೆ ಪಕ್ಕದ ಜಮೀನಿನ ಮಾಲೀಕರು ನೀರು ಹಾಯಿಸಲು ಹೋದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನೂ ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮದ ಪ್ರಕಾಶ್ ಹಾಗೂ ಮಧು ಎಂಬ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ