ಸಿರಗುಪ್ಪ: ತಾಲೂಕಿನ ಬಾಗೇವಾಡಿಯಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಅ.16,ಗುರುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ರವರು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಬಾಗೇವಾಡಿ ಗ್ರಾಮ ಪಂಚಾಯತಿಯಲ್ಲಿ ನಿರ್ಮಿಸಲಾದ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ.ಎಸ್. ಸೋಮಲಿಂಗಪ್ಪ ಸರ್, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು ಹಾಗೂ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿಯವರು ಗೌರವಪೂರ್ಣವಾಗಿ ಹೂಗುಚ್ಛ ನೀಡಿ ಸ್ವಾಗತಿಸಿದರು.