ಶಿವಮೊಗ್ಗ: ನ.7 ರಿಂದ 10 ರವರೆಗೆ ಕೃಷಿ ಮೇಳ: ನಗರದಲ್ಲಿ ಕೃಷಿ ವಿವಿಯ ಕುಲಪತಿ ಡಾ.ಆರ್.ಸಿ.ಜಗದೀಶ್
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷ ವಾಕ್ಯದಲ್ಲಿ ನವೆಂಬರ್ 7ರಿಂದ ನವೆಂಬರ್ 10ರವರೆಗೆ ಶಿವಮೊಗ್ಗದ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ಮಂಗಳವಾರ ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.