ಹುಬ್ಬಳ್ಳಿ ನಗರ: ನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಶಾಸಕ ಮಹೇಶ್ ಟೆಂಗಿನಕಾಯಿ
ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿಂದು ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಉಣಕಲ್ ಹಾಗೂ ಸಾಯಿನಗರ ಪ್ರದೇಶಗಳಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಾರ್ಡ್ ನಂಬರ್ 50ರ ಹೊಸೂರಿನಲ್ಲಿ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಣಿವಿಲಾಸ ಅಪಾರ್ಟ್ಮೆಂಟ್ ಅಭಿವೃದ್ಧಿ ಕಾರ್ಯಗಳ ಕುರಿತು ಶಾಸಕ ಮಹೇಶ್ ಟೆಂಗಿನಕಾಯಿ ಅವರು ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ಪಾಲಿಕೆಯ ಆಯುಕ್ತರಾದ ರುದ್ರೇಶ ಗಾಳಿ, ಸಹಾಯಕ ಆಯುಕ್ತರಾದ ಸಲೀಮ್ ಹುಸೇನ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.