ಧಾರವಾಡ: ಮೊಬೈಲ್ ಬಳಕೆ ಬಗ್ಗೆ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ: ನಗರದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು
ಮೊಬೈಲ್ ಬಳಕೆ ಬಗ್ಗೆ ಸಾಮಾನ್ಯ ಜ್ಞಾನ ಅವಶ್ಯಕ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಿದ್ದ ಆರ್ಥಿಕ ವಂಚನೆ, ಸೈಬರ್ ಕ್ರೈಮ್, ಡಿಜಿಟಲ್ ಅರೆಸ್ಟ್ ಮತ್ತು ಕೆಜಿಐಡಿ ಸೌಲಭ್ಯಗಳ ಕುರಿತ ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರಲ್ಲಿ ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದಿರುವುದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿ