ಶ್ರೀನಿವಾಸಪುರ: ನಗರದಲ್ಲಿ ಈಚರ್ ಮತ್ತು ಆಟೋ ಮುಖಾಮುಖಿ ಡಿಕ್ಕಿ; ಓರ್ವ ಮಹಿಳೆ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯ
ಈಚರ್ ಮತ್ತು ಆಟೋ ಮುಖಾಮುಖಿ ಡಿಕ್ಕಿ; ಓರ್ವ ಮಹಿಳೆ ಸಾವು, ೮ಕ್ಕೂ ಹೆಚ್ಚು ಮಂದಿಗೆ ಗಾಯ ಶ್ರೀನಿವಾಸಪುರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರದಿಂದ ಮುಳಬಾಗಿಲು ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಮತ್ತು ಎದುರಿನಿಂದ ಬಂದ ಈಚರ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮುಳಬಾಗಿಲು ತಾಲೂಕಿನ ವಜ್ರನಾಗೇನಹಳ್ಳಿ ಗ್ರಾಮದ ಯಶೋದಮ್ಮ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ಎಂಟು ಮಂದಿಗೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ