ಹೆಗ್ಗಡದೇವನಕೋಟೆ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಶಾಸಕ ಅನಿಲ್ ಮತಯಾಚನೆ
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಶಾಸಕ ಅನಿಲ್ ಚಿಕ್ಕಮಾದು ಶನಿವಾರ ಮಧ್ಯಾಹ್ನ ಮೂರರ ಸಮಯದಲ್ಲಿ ಮತಯಾಚನೆ ಮಾಡಿದರು. ಹಂಪಾಪುರ ಸಮೀಪದ ಕಂಚಮಳ್ಳಿ, ಹಂಪಾಪುರ, ಹೊಮ್ಮರಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರವನ್ನು ನಡೆಸಿದರು. ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ ಕ್ಷೇತ್ರದಲ್ಲಿ ನನ್ನನ್ನು ಎರಡನೇ ಬಾರಿಗೆ ಶಾಸಕನಾಗಿ ಆಯ್ಕೆ ಮಾಡಿದ ಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆಯುವ ಪಕ್ಷ ತಾಲೂಕಿನಲ್ಲಿ ನಾನು ಶಾಸಕನಾಗಿ ಪ್ರತಿ ಗ್ರಾಮಗಳಿಗೂ ಸುಮಾರು ಎರಡು ಮೂರು ಬಾರಿ ಭೇಟಿ ಮಾಡಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದರು.