ಹುಬ್ಬಳ್ಳಿ ನಗರ: ನಗರದಲ್ಲಿ  ಬಂಗಾರ ಪತ್ತೆ ಹಚ್ಚಿದ ಪೊಲೀಸರು
ಹುಬ್ಬಳ್ಳಿ: ಕಳೆದುಹೋಗಿದ್ದ ಬಂಗಾರವನ್ನು 24 ಗಂಟೆಯೊಳಗೆ ಪತ್ತೆ ಹಚ್ಚುವಲ್ಲಿ ಹುಬ್ಬಳ್ಳಿ ಕಸಬಾಪೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ ಒಂದು ದಿನದೊಳಗೆ ಕಳೆದುಹೋಗಿದ್ದ ಬಂಗಾರವನ್ನು ಪತ್ತೆ ಹಚ್ಚಿ, ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಪೊಲೀಸರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಒಬ್ಬ ವ್ಯಕ್ತಿ ತನ್ನ ಕೈಯಲ್ಲಿದ್ದ ಬಂಗಾರ ಕಳೆದುಕೊಂಡಿದ್ದರು. ತಕ್ಷಣವೇ ಕಸಬಾಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದಾಗ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಚುರುಕಾಗಿ ಕಾರ್ಯನಿರ್ವಹಿಸಿದ ಪೊಲೀಸರು, ಕೇವಲ 24 ಗಂಟೆಗಳಲ್ಲಿ ಬಂಗಾರ ಅನ್ನು ಪತ್ತೆ ಹಚ್ಚಿ, ಅದರ ಮಾಲೀಕರಿಗೆ ತಲುಪಿಸಿದ್ದಾರೆ.