ಬೆಂಗಳೂರು ಉತ್ತರ: ಮೇ.4ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ನೀಟ್ ಪರೀಕ್ಷೆ
ಇಂದು ರಾಜ್ಯದಲ್ಲಿ 2025 ರ ನೀಟ್- ಪರೀಕ್ಷೆ ನಡೆಯಲಿದೆ. ವೈದ್ಯಕೀಯ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 2ಗಂಟೆಯಿಂದ ಸಂಜೆ 5ಗಂಟೆಯವರೆಗೆ ನಡೆಯಲಿರುವ ನೀಟ್ ಪರೀಕ್ಷೆ ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಎನ್ಟಿಎ ವತಿಯಿಂದ ನಡೆಯಲಿರುವ ಈ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮಧ್ಯಾಹ್ನ 1.30ರ ಒಳಗೆ ಪ್ರವೇಶಾತಿ ಪತ್ರದೊಂದಿಗೆ ಹಾಜರಿರಬೇಕು ಎಂದು ಸೂಚಿಸಲಾಗಿದೆ.