ಶಿವಮೊಗ್ಗ: ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗದಲ್ಲಿ ರಹಮತ್ ಉಲ್ಲಾ ಅಸಾದಿ ರಾಜೀನಾಮೆ, ಕೂತಹಲ ಮೂಡಿಸಿದ ಅಧ್ಯಕ್ಷರ ನಡೆ
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಹಮತ್ ಉಲ್ಲಾ ಅಸಾದಿ ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗ ಎಸಿ ಸತ್ಯನಾರಾಯಣ್ ಅವರಿಗೆ ಮಂಗಳವಾರ ಸಂಜೆ 5 ಗಂಟೆಗೆ ರಾಜೀನಾಮೆ ಪತ್ರ ನೀಡಿದ್ದಾರೆ. ರಹಮತ್ ಉಲ್ಲಾ ಅಸಾದಿ ಕಳೆದ ಒಂದು ವರ್ಷದಿಂದ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸದರಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದಲೇ ಭಾರಿ ಒತ್ತಡ ಬಂದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದು ಮುಂದಿನ ಅಧ್ಯಕ್ಷ ಸ್ಥಾನ ಹಾಗೂ ಅಸಾದಿ ಅವರ ಮುಂದಿನ ನಡೆ ತೀವ್ರ ಕುತೂಹಲ ಮೂಡಿಸಿದೆ. ರಾಹಮತ್ ಉಲ್ಲಾ ಅಸಾದಿ ಅವರ ರಾಜೀನಾಮೆ ಬೆನ್ನಲ್ಲೇ ಪಟ್ಟಣ ಪಂಚಾಯಿತಿಯಲ್ಲಿ ಚುನಾವಣೆ ನಡೆಯಬೇಕಿದೆ.