ನಮ್ಮ ಸಂವಿಧಾನ ಅಸಮಾನತೆ ತೊಡೆದು ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ : ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಅಂಬೇಡ್ಕರ್ ಸಮಾಜದ ಎಲ್ಲಾ ಶೋಷಿತರ ಆಶಾಕಿರಣವಾಗಿದ್ದು, ಅವರು ನೀಡಿರುವ ವಿಶ್ವಶ್ರೇಷ್ಠವಾದ ನಮ್ಮ ಸಂವಿಧಾನ ಅಸಮಾನತೆ ತೊಡೆದು ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳ್ಳಿಗೆ 11 ಗಂಟೆಯಲ್ಲಿ ನಡೆದ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.ಇಡೀ ವಿಶ್ವದಲ್ಲೇ ನಮ್ಮದು ಶ್ರೇಷ್ಟವಾದ