ತರೀಕೆರೆ: ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ಲಿಂಗದಹಳ್ಳಿ ಜನರ ಪರದಾಟ.!
ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲದೆ ಸೂಕ್ತ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರಕದೆ ಜನರು ಪರದಾಟ ಪಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆಯುತ್ತಿದೆ. ಲಿಂಗದಹಳ್ಳಿ ಹೋಬಳಿ ಕೇಂದ್ರವಾಗಿದ್ದರು ಕೂಡ ಇಲ್ಲಿ ವಾರದಲ್ಲಿ ಕೇವಲ ಮೂರು ದಿನ ಮಾತ್ರ ವೈದ್ಯರು ಲಭ್ಯವಿರುತ್ತಾರೆ ಇನ್ನುಳಿದ ನಾಲ್ಕು ದಿನಗಳು ವೈದ್ಯರು ಇರುವುದಿಲ್ಲ ಯಾರಿಗಾದರೂ ಆರೋಗ್ಯ ತಪ್ಪಿದರೆ ಆಸ್ಪತ್ರೆಗೆ ತರೀಕೆರೆ ಅಥವಾ ಬೀರೂರಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು ಸರ್ಕಾರ ಕೂಡಲೇ ಖಾಯಂ ವೈದ್ಯರನ್ನ ನೇಮಕ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.