ಬೀಳಗಿ: ಪಟ್ಟಣದಲ್ಲಿ ಮಳೆಯಿಂದ ಹಾನಿಯುಂಟಾದ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಜೆ.ಟಿ.ಪಾಟೀಲ್
Bilgi, Bagalkot | Sep 23, 2025 ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಗಳು ಮತ್ತು ಬೆಳೆಗಳಿಗೆ ಹಾನಿಯುಂಟಾಗಿದ್ದು, ಶಾಸಕ ಜೆ.ಟಿ.ಪಾಟೀಲ್ ಅವರು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸ್ಥಳಿಯರ ಅಹವಾಲುಗಳನ್ನು ಆಲಿಸಿದರು.ಸರ್ಕಾರದಿಂದ ಅಗತ್ಯ ಪರಿಹಾರ ಕೊಡಿಸುವ ಭರವಸೆ ನೀಡಿದರು.ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.