ಜೋಯಿಡಾ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ಸಹಯೋಗದಲ್ಲಿ ಜೋಯಿಡಾ ತಾಲೂಕಿನಲ್ಲಿ ಮಂಜೂರಾದ ಅಂದಾಜು 376.20ಲಕ್ಷ ರೂ.ಗಳಲ್ಲಿ ನಿರ್ಮಾಣವಾಗಲಿರುವ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಕಾಮಗಾರಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ ದೇಶಪಾಂಡೆ ಅವರು ಗುರುವಾರ ಮಧ್ಯಾಹ್ನ 12:30 ಗಂಟೆ ಸುಮಾರಿಗೆ ಭೂಮಿಪೂಜೆ ಕೈಗೊಂಡು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ಮಂಜೂರಾದ ಅರ್ಹ ಫಲಾನುಭವಿಗಳಿಗೆ ಪವರ್ ಟಿಲ್ಲರಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಕುಮಾರ್ ಎನ್.ಎಂ, ಡಿವೈಎಸ್ಪಿ ಶಿವಾನಂದ ಮದರಕಂಡಿ ಮೊದಲಾದವರು ಉಪಸ್ಥಿತರಿದ್ದರು