ಬೆಳಗಾವಿ: ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿ 133 ವರ್ಷ ನಗರದಲ್ಲಿ ರಾಮಕೃಷ್ಣ ಮಿಷನ್ ವತಿಯಿಂದ ವಿಶೇಷ ಕಾರ್ಯಕ್ರಮ
ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿ 133 ವರ್ಷ ರಾಮಕೃಷ್ಣ ಮಿಷನ್ ವತಿಯಿಂದ ವಿಶೇಷ ಕಾರ್ಯಕ್ರಮ. ಭಾರತ ಪ್ರವಾಸದ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿದ್ದ ಘಟನೆಗೆ 133 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ರಾಮಕೃಷ್ಣ ಮಿಷನ್ ಆಶ್ರಮದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ವಾಮಿ ವಿವೇಕಾನಂದರು ಬೆಳಗಾವಿಯ ರಿಸಿಲ್ದಾರ ಗಲ್ಲಿಯಲ್ಲಿರುವ ಭಾತೆ ಅವರ ನಿವಾಸದಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಿದ್ದರು. ಇದೀಗ ಭಾತೆ ಅವರ ನಿವಾಸದಲ್ಲಿ 'ಸ್ವಾಮಿ ವಿವೇಕಾನಂದ ಸ್ಮಾರಕ'ವನ್ನು ನಿರ್ಮಿಸಲಾಗಿದೆ.