ಶಿವಮೊಗ್ಗ: ಡೆಂಘಿ ಪ್ರಕರಣ ಹೆಚ್ಚಳ ಹಿನ್ನೆಲೆ ಶಿರಾಳಕೊಪ್ಪ ಸಮುದಾಯ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ
ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಕರಣ ಹೆಚ್ಚಾಗಿದ್ದು, ಶಿರಾಳಕೊಪ್ಪ ಪಟ್ಟಣದ ಸಮುದಾಯ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಿ.ವೈ.ವಿಜಯೇಂದ್ರ ಅವರು ಮಂಗಳವಾರ ಭೇಟಿ ನೀಡಿದ್ದಾರೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿದ ಅವರು ರೋಗಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸಿಬ್ಬಂದಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ ಆರೋಗ್ಯ ಸಿಬ್ಬಂದಿಗಳು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕೆಲಸ ನಿರ್ವಹಿಸುವಂತೆ ಹೇಳಿದ್ದು, ಆಸ್ಪತ್ರೆಯ ಸಿಬ್ಬಂದಿಗಳು ನಿರ್ಲಕ್ಷ ವಹಿಸಿದರೆ ಕ್ರಮ ಕೈಗೊಳ್ಳುವದಾಗಿ ಎಚ್ಚರಿಕೆಯನ್ನು ಸಹ ಬಿ.ವೈ.ವಿಜಯೇಂದ್ರ ನೀಡಿದ್ದಾರೆ