ಬೆಂಗಳೂರು ಉತ್ತರ: ಅಪ್ಪು ಪುಣ್ಯ ಸ್ಮರಣೆ - ಪತ್ನಿ, ಕುಟುಂಬಸ್ಥರಿಂದ ಪೂಜೆ
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಇಂದಿಗೆ 4 ವರ್ಷಗಳು ತುಂಬಿದ್ದು, ಅವರ ಅಭಿಮಾನಿಗಳು ಬೆಂಗಳೂರಿನ ಕಂಠೀರವ  ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು, ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಅಣ್ಣ ಶಿವರಾಜ್‌ಕುಮಾರ್ ಸೇರಿದಂತೆ ಆಪ್ತರು ಹಾಗೂ ಅಭಿಮಾನಿಗಳು ಭಾವನಾತ್ಮಕವಾಗಿ ನಮನ ಸಲ್ಲಿಸಿ, ಪುನೀತ್ ಅವರ ನೆನಪನ್ನು ಸ್ಮರಿಸಿಕೊಂಡರು. ಬೆಳಿಗ್ಗೆಯಿಂದಲೇ ಸಮಾಧಿ ಸ್ಥಳದಲ್ಲಿ ಪೂಜೆ ಮತ್ತು ಹೂವಿನ ಅಲಂಕಾರ ಮಾಡಲಾಗಿತ್ತು.