ಶಿವಮೊಗ್ಗ ನಗರದ ಹರಿಗೆ ಬಳಿ ಎರಡು ಬೈಕ್ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದು ಆಟೋಗೆ ಗುದ್ದಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ 6 ಗಂಟೆಗೆ ಘಟನೆ ನಡೆದಿದ್ದು ಅಪಘಾತದಲ್ಲಿ ಬೈಕ್ ಸವಾರ ಹಾಗೂ ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನ ಸ್ಥಳೀಯರ ನೆರವಿನಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.