ಶಿವಮೊಗ್ಗ: ಸರ್ಕಾರದಿಂದ ಬರಬೇಕಾದ ಗುತ್ತಿಗೆದಾರರ ಬಾಕಿ ಮೊತ್ತ ಕೂಡಲೇ ಬಿಡುಗಡೆ ಮಾಡಿ -ಜಿಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರ ಸಂಘ ಜಿಲ್ಲಾಧ್ಯಕ್ಷ ಶಶಿಕುಮಾರ
ಸರ್ಕಾರದಿಂದ ಬರಬೇಕಾದ ಗುತ್ತಿಗೆದಾರರ ಬಾಕಿ ಮೊತ್ತವನ್ನು 15 ದಿನಗಳಲ್ಲಿ ಬಿಡುಗಡೆ ಮಾಡದೇ ಇದ್ದರೆ ರಾಜ್ಯಾದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಶಶಿಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಟಿ ನಡೆಸಿ ಶುಕ್ರವಾರ ಸಂಜೆ 4:30 ಕ್ಕೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಇಲಾಖೆಗಳಿಗೆ ಕಾಮಗಾರಿಗೆ ಸಂಬಂಧ ಪಟ್ಟಂತೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಸರ್ಕಾರದ ಖಜಾನೆಯಲ್ಲಿ ಹಣವಿಲ್ಲವೆಂದು ಸಬೂಬು ಹೇಳಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದರಲ್ಲಿಯೇ ಕಾಲ ಕಳೆಯುತ್ತಿದೆ ಎಂದು ದೂರಿದ್ದಾರೆ