ದೇವದುರ್ಗ: ದೇವದುರ್ಗ : ಸಾಮೂಹಿಕ ಅತ್ಯಾಚಾರ, ಕೊಲೆ ಅರೋಪಿಗಳ ಬಂದನಕ್ಕೆ ಒತ್ತಾಯ
ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಮಾಡಿ, ಕೊಲೆ ಮಾಡಿದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ದೇವದುರ್ಗ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಾಲಕಿಯನ್ನು ಅತ್ಯಾಚಾರ ಮಾಡಿ 12 ತಾಸು ಚಿತ್ರಹಿಂಸೆ ಮಾಡಿ ಕೊಲೆ ಮಾಡಿದ್ದಾರೆ. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದರು ಆರೋಪಿಗಳಿಗೆ ಯಾವುದೇ ಕಠಿಣ ಶಿಕ್ಷೆ ಆಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.