ಚನ್ನಗಿರಿ: ಸೂಳೆಕೆರೆಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ; ಪ್ರಕರಣ ದಾಖಲು
ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಸೂಳೆಕೆರೆಯಲ್ಲಿ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಬುಸೇನಹಳ್ಳಿ ಗ್ರಾಮದ 48 ವರ್ಷದ ನಾಗರಾಜ್‌ನನ್ನು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಆತ್ಮಹತ್ಯೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.