ಬೆಂಗಳೂರು ಉತ್ತರ: ಕರೂರು 39 ಜನರ ಸಾವಿನ ದುರ್ಘಟನೆ ಅತ್ಯಂತ ದುಖಃಕರ: ನಗರದಲ್ಲಿ ಸುಧಾಕರ್ ರೆಡ್ಡಿ
ತಮಿಳ್ನಾಡಿನ ಕರೂರಿನಲ್ಲಿ ಸಂಭವಿಸಿದ ವಿಜಯ್ ಅವರ ಪಕ್ಷದ ರ್ಯಾಲಿಯ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು 39 ಜನರ ಸಾವಿನ ದುರ್ಘಟನೆ ಅತ್ಯಂತ ದುಃಖಕರ ಎಂದು ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ; ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರವೇ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಮಾಧ್ಯಮಗಳ ಜೊತೆ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ದುರ್ಘಟನೆಯ ಕುರಿತು ಸುಪ್ರೀಂ ಕೋರ್ಟಿನ ಕಾರ್ಯನಿರತ ನ್ಯಾಯಮೂರ್ತಿಗಳಿಂದ ವಿಸ್ತಂತ ತನಿಖೆ ಆಗಬೇಕು; ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೇಡ ಎಂದು ತಿಳಿಸಿದರು.