ಬೆಂಗಳೂರು ಭವಿಷ್ಯದ ನಗರವಾಗಿ ರೂಪುಗೊಳ್ಳುತ್ತಿದ್ದು, ಇದಕ್ಕಾಗಿ ನಮ್ಮ ಸರ್ಕಾರ ಟನಲ್ ರಸ್ತೆ, ಮೇಲ್ಸೇತುವೆ, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಬಾಲ್ಡ್ ವಿನ್ ಶಾಲೆಯಲ್ಲಿ ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಿದ್ದ ಯುನೈಟೆಡ್ ಕ್ರಿಸ್ಮಸ್ ಆಚರಣೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿ, “ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು ಇದ್ದಾರೆ. 2 ಲಕ್ಷ ವಿದೇಶಿ ಪಾಸ್ ಪೋರ್ಟ್ ಹೊಂದಿರುವವರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. 20 ವರ್ಷಗಳ ಹಿಂದೆ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು, ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. 1.30 ಕೋಟಿ ವಾಹನಗಳಿವೆ.