ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ವನ್ಯಜೀವಿ ಸಫಾರಿ ಬಂದ್ ಆದ ಬಳಿಕ ಮಾನವ ಮತ್ತು ಪ್ರಾಣಿ ಸಂಘರ್ಷ ಕಡಿಮೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಕೊಳ್ಳೇಗಾಲದಲ್ಲಿ ಬುಧವಾಯ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಜೀವನ - ಜೀವನೋಪಾಯ ಎರಡೂ ಕೂಡ ಮುಖ್ಯ , ಭೂಮಿ ಮೇಲಿರುವ ಎಲ್ಲಾ ಜೀವಿಗಳಿಗೂ ಬದುಕಲು ಹಕ್ಕಿದೆ, ಅರಣ್ಯ ಸಂರಕ್ಷಣೆ- ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದಾಗಿದ್ದು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಸಫಾರಿ ಪುನರ್ ಆರಂಭ ಕುರಿತು ರೈತರು, ಜನಪ್ರತಿನಿಧಿಗಳು, ಸಾರ್ವಜನಿಕರ ಜೊತೆ ಚರ್ಚಿಸಿ- ಅವಲೋಕಿಸಿ ನಿರ್ಧಾರ ಮಾಡುತ್ತೇವೆ ಎಂದರು.